
ಈಶ ನಿನ್ನ ಚರಣ ಭಜನೆ ಆಶೆಯಿಂದ ಮಾಡುವೆನು ದೋಷ ರಾಶಿ ನಾಶ ಮಾಡು ಶ್ರೀಶ ಕೇಶವ
ಶರಣು ಹೊಕ್ಕೆನಯ್ಯ ಎನ್ನ ಮರಣ ಸಮಯದಲ್ಲಿ ನಿನ್ನ ಚರಣ ಸ್ಮರಣೆ ಕರುಣಿಸಯ್ಯ ನಾರಾಯಣ||1||
ಶೋಧಿಸೆನ್ನ ಭವದ ಕಲುಷ ಬೋಧಿಸಯ್ಯ ಜ್ಞಾನವೆನಗೆ ಬಾಧಿಸುವಾ ಯಮನ ಬಾಧೆ ಬಿಡಿಸು ಮಾಧವ|| 2||
ಹಿಂದನೇಕ ಯೋನಿಗಳಲಿ ಬಂದು ಬಂದು ನೊಂದೆ ನಾನು ಇಂದು ಭವದ ಬಂಧ ಬಿಡಿಸು ತಂದೆ ಗೋವಿಂದನೆ ||3||
ಭ್ರಷ್ಟನೆನಿಸ ಬೇಡ ಕೃಷ್ಣ ಇಷ್ಟು ಮಾತ್ರ ಬೇಡಿಕೊಂಬೆ ಶಿಷ್ಟರೊಳಗೆ ಇಟ್ಟು ಕಷ್ಟ ಬಿಡಿಸು ವಿಷ್ಣುವೆ ||4||
ಮೊದಲು ನಿನ್ನ ಪಾದ ಪೂಜೆ ಮುದದಿ ಗೈವೆನಯ್ಯ ನಾನು ಹೃದಯದೊಳಗೆ ಒದಗಿಸಯ್ಯ ಮಧುಸೂದನ ||5||
ಕವಿದುಕೊಂಡು ಇರುವ ಪಾಪ ಸವೆದು ಹೋಗುವಂತೆ ಮಾಡಿ ಜವನ ಬಾಧೆಯನ್ನು ಬಿಡಿಸೊ ಘನ ತ್ರಿವಿಕ್ರಮ ||6||
ಕಾಮಜನಕ ನಿನ್ನ ನಾಮ ಪ್ರೇಮದಿಂದ ಪಾಡುವಂಥ ನೇಮವೆನಗೆ ಪಾಲಿಸಯ್ಯ ಸ್ವಾಮಿ ವಾಮನ ||7||
ಮದನನಯ್ಯ ನಿನ್ನ ಮಹಿಮೆ ವದನದಲ್ಲಿ ಇರುವ ಹಾಗೆ ಹೃದಯದಲ್ಲಿ ಸದನ ಮಾಡು ಮುದದಿ ಶ್ರೀಧರ ||8||
ಹುಸಿಯನಾಡಿ ಹೊಟ್ಟೆ ಹೊರೆವ ವಿಷಯದಲ್ಲಿ ರಸಿಕನೆಂದು ಹುಸಿಗೆ ನನ್ನ ಹಾಕದಿರೋ ಹೃಷಿಕೇಶನೆ ||9||
ಅಬ್ಧಿಯೊಳಗೆ ಬಿದ್ದು ನಾನು ಒದ್ದುಕೊಂಬೆನಯ್ಯ ಭವದಿಗೆದ್ದು ಪೋಪ ಬುದ್ಧಿ ತೋರೊ ಪದ್ಮನಾಭನೆ||10||
ಪಂಕಜಾಕ್ಷ ನೀನು ಎನ್ನ ಮಂಕುಬುದ್ಧಿ ಬಿಡಿಸಿ ನಿನ್ನ ಕಿಂಕರನ್ನ ಮಾಡಿಕೊಳ್ಳೊ ಸಂಕರುಷಣ||11||
ಕಾಮಕ್ರೋಧ ಬಿಡಿಸಿ ನಿನ್ನ ನಾಮ ಜಿಹ್ವೆಯೊಳಗೆ ನುಡಿಸು ಶ್ರೀಮಹಾನುಭಾವನಾದ ದಾಮೋದರ ||12||
ಏಸು ಜನ್ಮ ಬಂದರೇನು ದಾಸನಲ್ಲವೇನೊ ನಿನ್ನ ಘಾಸಿ ಮಾಡದಿರೋ ಎನ್ನ ವಾಸುದೇವನೆ ||13||
ಬುದ್ಧಿ ಶೂನ್ಯನಾಗಿ ನಾನು ಕದ್ದ ಕಳ್ಳನಾದೆನಯ್ಯ ತಿದ್ದಿ ಹೃದಯ ಶುದ್ಧಿ ಮಾಡೊ ಪ್ರದ್ಯುಮ್ನನೆ ||14||
ಜನನಿ ಜನಕ ನೀನೆ ಎಂದು ಎನುವೆನಯ್ಯ ದೀನಬಂಧು ಎನಗೆ ಮುಕ್ತಿ ಪಾಲಿಸಿಂದು ಅನಿರುದ್ಧನೆ ||15||
ಹರುಷದಿಂದ ನಿನ್ನ ನಾಮ ಸ್ಮರಿಸುವಂತೆ ಮಾಡು ನೇಮ ಇರಿಸು ಚರಣದಲ್ಲಿ ಕ್ಷೇಮ ಪುರುಷೋತ್ತಮ ||16||
ಸಾಧು ಸಂಗ ಕೊಟ್ಟು ನಿನ್ನ ಪಾದಭಜಕನೆನಿಸು ಎನ್ನಭೇದ ಮಾಡಿ ನೋಡದಿರೋ ಅಧೋಕ್ಷಜ ||17||
ಚಾರು ಚರಣ ತೋರಿ ಎನಗೆ ಪಾರುಗಾಣಿಸಯ್ಯ ಕೊನೆಗೆ ಭಾರ ಹಾಕಿ ಇರುವೆ ನಿನಗೆ ನಾರಸಿಂಹನೆ ||18||
ಸಂಚಿತಾರ್ಥ ಪಾಪಗಳನು ಕಿಂಚಿತಾದರುಳಿಯದಂತೆ ಮುಂಚಿತಾಗಿ ಕಳೆದು ಪೊರೆಯೊ ಸ್ವಾಮಿ ಅಚ್ಯುತ||19||
ಜ್ಞಾನ ಭಕ್ತಿ ಕೊಟ್ಟು ನಿನ್ನ ಧ್ಯಾನದಲ್ಲಿ ಇಟ್ಟು ಎನ್ನ ಹೀನ ಬುದ್ಧಿ ಬಿಡಿಸೊ ಮುನ್ನ ಜನಾರ್ದನ ||20||
ಜಪ ತಪ ಅನುಷ್ಠಾನ ನೀನು ಒಪ್ಪುವಂತೆ ಮಾಡಲಿಲ್ಲ ತಪ್ಪ ಕೋಟಿ ಕ್ಷಮಿಸಬೇಕು ಉಪೇಂದ್ರನೆ ||21||
ಮೊರೆಯನಿಡುವೆನಯ್ಯ ನಿನಗೆ ಸೆರೆಯ ಬಿಡಿಸು ಭವದ ಎನಗೆ ಇರಿಸು ಭಕ್ತರೊಳಗೆ ಪರಮಪುರುಷ ಶ್ರೀಹರೇ||22||
ಪುಟ್ಟಿಸಲೇ ಬೇಡವಿನ್ನು ಪುಟ್ಟಿಸಿದಕೆ ಪಾಲಿಸಿನ್ನು ಇಷ್ಟು ಬೇಡಿಕೊಂಬೆ ನಾನು ಶ್ರೀಕೃಷ್ಣನೆ||23||
ಸತ್ಯವಾದ ನಾಮಗಳನು ನಿತ್ಯದಲ್ಲಿ ಪಠಿಸುವವರ ಅರ್ತಿಯಿಂದ ಕಾಯದಿರನು ಕರ್ತೃ ಕೇಶವ ||24||
ಮರೆತು ಬಿಡದೆ ಹರಿಯ ನಾಮ ಬರೆದು ಓದಿ ಕೇಳುವರಿಗೆ ಕರೆದು ಮುಕ್ತಿ ಕೊಡುವ ನೆಲೆಯಾದಿ ಕೇಶವ ||25||
Lyrics in English
Eesha ninna charana bhajane
aaseyinda maaduvenu
dosha rashi naasha maadu shreesha keshava ||
Sharanu hokkenayya yenna
marana samayadalli ninna
charana smarane karunisayya narayana ||1||
Shodhisenna bhavada kalusha
bhodisayya gnyanavenage
baadhisuva yamana baadhe bidisu maadhava ||2||
Hinde aneka yonigalali bandu bandu nonde naanu
indu bhavada bandha bidisu thande Govindane ||3||
Bhrashtanenisa beda krishna
ishtu maatra bedikombe
shishtarodane ittu kashta bidisu vishnuve ||4||
Modalu ninna paada pooje mudadi gaivenayya naanu hrudayadolage odagisayya madhusoodana ||5||
Kavidukondu Iruva Paapa
Savidu Poguvanthe Maado
Javana Badheyannu Bidisu Thrivikrama ||6||
Kaamajanaka ninna premadinda paaduvantha nemavenage paalisayya swami vaamana ||7||
Madananayya Ninna Mahime
Vadanadalli eruva haage
Hrudayadalli sadana maadu mudadi sridhara ||8||
Husiyanaadi hotte horeva
vishayadalli rasikanendu
husige haakadiro hrushikeshane||9||
Abdiyolage biddu naanu oddukombenayya bhavadigeddu popa buddi thoro padmanaabhane ||10||
Pankajaaksha neenu yenna
manku buddhiyannu bidisi
kinkaranna maadikollo sankarshana||11||
Kamakrodha bidisi ninna naama jihveyolage nudisu sri mahaanubhavanaada damodara ||12||
Yeshtu januma bandarenu
daasanallavenu naanu
ghaasi maadadiru innu vasudevane ||13||
Buddhi shoonyanaagi yenna
baddha kaaya kuhaka manava
thiddi hrudaya shuddhi maado pradyumnane ||14||
Janani janaka neene yendu
nenevenayya deena bandhu
yenage mukthi paalisinnu aniruddane ||15||
Harushadinda ninna naama
smarisuvanthe maadu nema
irisu charanadalli prema Purushottama ||16||
Saadhu sanga kottu ninna paada bhajane itthu enna bheda maadi nodadiro sri adhokshaja||17||
Charu charana thori yenage
paarugaanisayya konege
bhara haakiruve ninage narasimhane||18||
Sanchithaadi papagalanu
kinchithaada peedegalanu
munchithavaagi kaledu poreyo swami achyutha ||19||
Gnyana bhakti kottu ninna
dhyanadalli ittu sada
heena buddhi bidisu munna shree janardhana ||20||
Japa tapa anushtaana neenu oppuvante maadalilla tappa koti kshamisabeku Upendrane ||21||
Moreya iduvenayya sereya bidisu bhavada enage
irisu bhaktarolage parama purusha Sri Hari ||22||
Puttisale beda innu puttisidake paalisinnu
Ishtu maatra bedikombe shri Krishnane ||23||
Sathyavaada naamagalanu
nithyadalli patisuvavara
Arthiyinda salahuthiruva kartru Keshava ||24||
Maretubidade hariya naama
baredu odhi kelidavage
karedu mukti koduva neleyaadikeshava ||25||