
ಧರಣಿಗೆ ದೊರೆಯೆಂದು ನಂಬಿದೆ ಇಂಥ
ಪರಮ ಲೋಭಿಯೆಂಬುದರಿಯೆ ಶ್ರೀ ಹರಿಯೆ||
ಕಾಡಿ ಬೇಡುವರಿಗೆ ಕೊಡಲಾರದೆ ಅಂಜಿ
ಓಡಿ ನೀರೊಳು ಸೇರಿಕೊಂಡೆ ಬೇಗ|
ಹೇಡಿಯ ತೆರದಲಿ ಮೋರೆಯ ತೋರದೆ
ಓಡಿ ಅರಣ್ಯದಿ ಮೃಗಗಳ ಸೇರಿದೆ||
ಬಡವರ ಬಿನ್ನಹ ಲಾಲಿಸದೆ ಹಲ್ಲ
ಕಡುಕೋಪದಲಿ ತೆರೆದಂಜಿಸಿದೆ|
ತಡೆಯದೆ ಭಿಕ್ಷುಕನಾದರು ಬಿಡರೆಂದು
ಕೊಡಲಿಯ ಪಿಡಿದು ಕೋಡಗ ಹಿಂಡ ಕಾಯ್ದೆ||
ಉತ್ತಮನೆಂದರೆ ಮತ್ತೆ ಚೋರನಾದೆ
ಬತ್ತಲೆ ನಿಂತೆ ತೇಜಿಯನೇರಿದೆ|
ಎತ್ತ ಹೋದರು ಬಿಡೆ ಮತ್ತೆ ನಿನ್ನನು ದೇವ
ಚಿತ್ತಜ ಜನಕ ಶ್ರೀ ಪುರಂದರ ವಿಟ್ಠಲ||
Lyrics in English
Dharanige doreyendu nambide intha parama lobhiyembudariye shri hariye
Kadi beduvarige kodalarade anji odi niroku seri konde bega|
hediya teradali moreya torade odi aranyadi mragagala seride||
Badavara bhinnaha lalisade halla kadu kopadali teradanjiside|
tadeyade bhikshukanadare bidarendu kodaliya pididu kodagahinda kaide||
Uttamanendare matte choranade battale ninte tejiyaeride
etta hodaru bide matte ninnanu deva chittaja janaka shri purandara vittala||